ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ನೇರ ಸಾಲ ಯೋಜನೆಯಡಿ ಅರ್ಜಿ ಆಹ್ವಾನ


ಜಯ ಧ್ವಜ ನ್ಯೂಸ್ ,ರಾಯಚೂರು ಆ. 17 - ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ 2026-27ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ನೇರವಾಗಿ ಸಾಲ-ಸಹಾಯಧನ ಮಂಜೂರು ಮಾಡಲು ಉದ್ದೇಶಿಸಿದೆ. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ (ಕ್ಯಾಟರಿಂಗ್), ಅಂಗಡಿ, ಟೈಲರಿಂಗ್ ಹಾಗೂ ಟ್ಯಾಕ್ಸಿ ಇತ್ಯಾದಿ ಇತರೆ ಯಾವುದೇ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ವಾರ್ಷಿಕವಾಗಿ ಶೇ.4% ದರದಲ್ಲಿ ಕನಿಷ್ಠ ರೂ.1.00 ಲಕ್ಷ ಹಾಗೂ ಗರಿಷ್ಠ ರೂ.2.00 ಲಕ್ಷಗಳ ಆರ್ಥಿಕ ನೆರವು ಮಂಜೂರು ಮಾಡಲಾಗುವುದು. ಸಾಲ ಸೌಲಭ್ಯವನ್ನು ಪಡೆಯಲುಬೇಕಾದ ಅರ್ಹತೆಗಳು ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (EWS ಪ್ರಮಾಣ ಪತ್ರ) ಹೊಂದಿರಬೇಕು. 8 ಲಕ್ಷ ಆದಾಯ ಮಿತಿ), ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 65 ವರ್ಷದ ಒಳಗಿನವರಾಗಿರಬೇಕು. ಒಂದು ಕುಟುಂಬದಿoದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಸಲ್ಲಿಸಲು ಅವಕಾಶವಿರುವುದಿಲ್ಲ. ಸಾಲದ ಉದ್ದೇಶವನ್ನು 10 ಪದಗಳಿಗಿಂತ ಕಡಿಮೆ ಇಲ್ಲದಂತೆ, ಸ್ಪಷ್ಟವಾಗಿ ಆನ್‌ಲೈಲ್ ಮೂಲಕ ಅರ್ಜಿಯಲ್ಲಿ ನಮೂದಿಸಬೇಕು. ಇಲ್ಲವಾದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುವುದು. ಮಹಿಳೆಯರಿಗೆ ಶೇ.33, ವಿಶೇಷ ಚೇತನರಿಗೆ ಶೇ.5 ಮೀಸಲಾತಿಯನ್ನು ನೀಡಲಾಗುವುದು. ಹಾಗೂ ಅರ್ಜಿದಾರರ ಆಧಾರ್ ಕಾರ್ಡ್ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು. ಮತ್ತು ಬ್ಯಾಂಕ್ ಖಾತೆ ಸೀಡ್ ಆಗಿರುವರು ಆಗಸ್ಟ್ 31ರ ಸಂಜೆ 5.30ರೊಳಗಾಗಿ ವೆಬ್‌ಸೈಟ್ ವಿಳಾಸ:   ನಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 8762249230/ 8029605888ಗೆ ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

Popular posts from this blog