ಕೊತ್ತದೊಡ್ಡಿ ಏಕಲವ್ಯ ಮಾದರಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಪೂವಿತಾ ಎಸ್. ದಿಢೀರ್ ಭೇಟಿ, ಪರಿಶೀಲನೆ
ಜಯ ಧ್ವಜ ನ್ಯೂಸ್ ,ರಾಯಚೂರು ಆ. 17- ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿನ ಕೊತ್ತದೊಡ್ಡಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ವಸತಿ ಶಾಲೆಯ ವ್ಯವಸ್ಥೆಯನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿಗಳು ಶಿಕ್ಷಕರೊಂದಿಗೆ ಸಭೆಯನ್ನು ನಡೆಸಿ, ಶಾಲೆಯಲ್ಲಿನ ಕುಂದು ಕೊರತೆಗಳನ್ನು ಆಲಿಸಿದರು.
ನಂತರ ವಸತಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಬೆರೆತು, ಶಾಲೆಯಲ್ಲಿ ದೊರೆಯುತ್ತಿರುವ ವಿವಿಧ ಸೌಲಭ್ಯಗಳ ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು.
ನಂತರ ವಿದ್ಯಾರ್ಥಿಗಳಿಗೆ ಆಸಕ್ತಿದಾಯಕವಾಗಿ ಕಲಿಯುವ ಕುರಿತು ಮತ್ತು ಜೀವನದಲ್ಲಿ ಯಶಸ್ಸನ್ನು ಸಾಧಿಸುವ ಛಲವನ್ನು ಹೊಂದುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಂತರ ವಸತಿ ಶಾಲೆಯಲ್ಲಿರುವ ಅಡುಗೆ ಕೊಠಡಿ ಮತ್ತು ಭೋಜನಾಲಯಕ್ಕೆ ಭೇಟಿ ನೀಡಿ ಅಲ್ಲಿರುವ ಸಮಸ್ಯೆಗಳ ಬಗ್ಗೆ ಅಡುಗೆಯವರು, ನಿಲಯ ಪಾಲಕರು ಹಾಗೂ ಪ್ರಾಂಶುಪಾಲರೊಂದಿಗೆ ಚರ್ಚಿಸಿ ಉತ್ತಮ ಗುಣಮಟ್ಟದ ಆಹಾರ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಅಧಿಕಾರಿ ಶಿವಮಾನಪ್ಪ, ದೇವದುರ್ಗ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ರಾಜಕುಮಾರ ಸೇರಿದಂತೆ ವಸತಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.


Comments
Post a Comment