ರಾಯಚೂರು ರಿಪೋರ್ಟರ್ಸ್ ಗಿಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ     
                                                      ಜಯ ಧ್ವಜ ನ್ಯೂಸ್ , ರಾಯಚೂರು, ಆ.15-ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ ನಿಂದ ಹಮ್ಮಿಕೊಂಡ 80 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅಧ್ಯಕ್ಷರಾದ ವಿಜಯಕುಮಾರ್ ಜಾಗಟಗಲ್ ಅವರು      ರಾಷ್ರಧ್ವಜಾರೋಹಣ ನೆರವೇರಿಸಿದರು. 

ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮ ದಲ್ಲಿ ಮೊದಲಿಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ,  ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು.

ನಂತರ ಮಾತನಾಡಿದ ಪತ್ರಕರ್ತರಾದ ಜಗನ್ನಾಥ ಪೂಜಾರಿ ಅಧ್ಯಕ್ಷರಾದ ವಿಜಯ ಜಾಗಟಗಲ್ ,ಸ್ವಾತಂತ್ರ್ಯ ಕ್ಕಾಗಿ ತ್ಯಾಗ ಮಾಡಿದ ಅನೇಕರ ಮಹನಿಯರ ಸ್ಮರಣೆ ಮಾಡಿದರು. 

ಈ ಸಂದರ್ಭದಲ್ಲಿ ವಾರ್ತಾ ಇಲಾಖೆ ಅಧಿಕಾರಿ ಜಿ.ಸುರೇಶ ಸೇರಿದಂತೆ ಹಿರಿಯ, ಕಿರಿಯ ಪತ್ರಕರ್ತರು ಉಪಸ್ಥಿತರಿದ್ದರು.

Comments

Popular posts from this blog