ಯುವತಿ ಕೊಲೆ ಪ್ರಕರಣ: ಕಠಿಣ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಧರ್ಮಸಿಂಗ್ ಸೂಚನೆ
ಜಯ ಧ್ವಜ ನ್ಯೂಸ್ ,ರಾಯಚೂರು. ಆ. 21- ರಾಯಚೂರು ಜಿಲ್ಲೆಯ ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಕ್ರಾಣಿಯಲ್ಲಿ ಅಶ್ವಿನಿ ಎಂಬ ಯುವತಿಯ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಜಯ್ ಧರ್ಮ ಸಿಂಗ್ ರವರು ತಿಳಿಸಿದ್ದಾರೆ.
ಈ ದುರದೃಷ್ಟಕರ ಘಟನೆಯ ವಿಷಯ ತಿಳಿಯುತ್ತಿದಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆಗೆ ತಕ್ಷಣವೇ ದೂರವಾಣಿ ಮುಖಾಂತರ ಮಾತನಾಡಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದು. ಈಗಾಗಲೇ ಪ್ರಕರಣ ದಾಖಲಾಗಿದ್ದು ಮೂರು ಆರೋಪಿಗಳನ್ನು ಬಂದಿಸಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.
ಈ ಪ್ರಕರಣವು ಅತ್ಯಂತ ಅಮಾನವೀಯ ಘಟನೆಯಾಗಿದ್ದು. ಇದರಲ್ಲಿ ಯಾರೇ ತಪ್ಪು ಮಾಡಿದರು ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ಥ ಯುವತಿಯ ಪಾಲಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಯುವತಿ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು. ಸರ್ಕಾರ ಸದಾ ಕಾಲ ಈ ಸಂಕಷ್ಟದಲ್ಲಿರುವವರ ಬೆಂಬಲಕ್ಕಿದೆ. ದುಷ್ಕರ್ಮಿಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ವಹಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಸಂಪೂರ್ಣ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಆರೋಪಿಗಳಿಗೆ ಕಠಿಣ ಶಿಕ್ಷೆ ಕೈಗೊಳ್ಳಬೇಕಾಗಿ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳಿಗೆ ಸೂಚನೆ ನೀಡಲಾಗಿದೆ.
ಈ ಘಟನೆಗೆ ವಿಷಾದವನ್ನು ವ್ಯಕ್ತಪಡಿಸುತ್ತ ಮುಂದೆ ಜಿಲ್ಲೆಯಲ್ಲಿ ಇಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ವಿಧಾನಸಭೆ ಅಧಿವೇಶನ ಹಾಗೂ ವಿಧಾನ ಪರಿಷತ್ತಿನ ಅಧಿವೇಶನ ನಿಮಿತ್ಯ ಬರಲು ಸಾಧ್ಯವಾಗಿಲ್ಲ. ಶೀಘ್ರದಲ್ಲಿಯೇ ಗ್ರಾಮಕ್ಕೆ ಭೇಟಿ ನೀಡುವುದಾಗಿ ತಿಳಿಸಿದ ಸಚಿವರು ಸಂತ್ರಸ್ತೆಯ ಕುಟುಂಬದೊಂದಿದೆ ಸರಕಾರ ಮತ್ತು ಜಿಲ್ಲಾಡಳಿತ ಇದೆ ಎಂದು ಅಭಯ ನೀಡಿದ್ದು. ಸರ್ಕಾರದಿಂದ ದೊರಕುವ ಸವಲತ್ತುಗಳನ್ನು ಕೊಡಿಸಲು ಎಲ್ಲಾ ಪ್ರಯತ್ನಗಳನ್ನು ನಾನು ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರ್ಮಸಿಂಗ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments
Post a Comment