ಜಿಲ್ಲಾ ಉಸ್ತುವಾರಿ ಸಚಿವರಿಂದ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ:

ಕೊನೆಯ ‌ಭಾಗದ ರೈತರಿಗೆ ಸಮರ್ಪಕವಾಗಿ ನೀರು ಹರಿಸಿ- ಸಚಿವ ಡಾ.ಅಜಯ್ ಧರ್ಮಸಿಂಗ್


ಜಯ ಧ್ವಜ ನ್ಯೂಸ್ ,ರಾಯಚೂರು ಆ. 31- ತುಂಗಭದ್ರಾ ಎಡದಂಡೆ ಕಾಲುವೆಯ ಅಚ್ಚುಕಟ್ಟು ಪ್ರದೇಶದ ಕೊನೆಯ ‌ಭಾಗದ ರೈತರಿಗೆ ಸಮರ್ಪಕವಾಗಿ ನೀರು ನಿರ್ವಹಣೆ ಮಾಡಬೇಕು. ಜಿಲ್ಲೆಯ ಬರಗಾಲ ಪೀಡಿತ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ಹೇಳಿದರು.

ಅವರಿಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಯಚೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆಗಳು, ಕೃಷಿ ಚಟುವಟಿಕೆಗಳು, ನೀರಾವರಿ ಸಮಸ್ಯೆಗಳು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಐದು‌ ತಾಲೂಕುಗಳನ್ನು ಬರ ಪೀಡಿತ ‌ತಾಲೂಕು ಎಂದು ಘೋಷಣೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂದು ಘೋಷಿಸಲು ಕ್ರಮ ವಹಿಸಲಾಗುತ್ತದೆ ಎಂದರು.

ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಮುಂಜಾಗ್ರತಾ ವಹಿಸಿ, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಹೆ ತಲುಪಿಸಲು ಶ್ರಮಿಸಬೇಕು.

ಮುಖ್ಯಮಂತ್ರಿಯವರು ರಾಯಚೂರು ಜಿಲ್ಲೆಗೆ ವಿಶೇಷ ಆದ್ಯತೆ ನೀಡಿದ್ದು, ಸರ್ಕಾರದ ಮಹತ್ವಾಕಾಂಕ್ಷಿ ಪ್ರಜಾಸೇವೆ ಕಾರ್ಯಕ್ರಮವನ್ನು ರಾಯಚೂರಿನಿಂದಲೇ ಪ್ರಾರಂಭಿಸಲು ನಿರ್ಧರಿಸಲಿದ್ದಾರೆ. ಮಾತ್ರವಲ್ಲದೆ, ಬರಗಾಲ ವೀಕ್ಷಣೆ ಪ್ರವಾಸವನ್ನು ಸಹ ಈ ಭಾಗದಿಂದಲೇ ಕೈಗೊಳ್ಳಲು ತೀರ್ಮಾನಿಸಿದ್ದಾರೆ ಎಂದರು.

ರಾಜಕೀಯ ಪಕ್ಷಗಳು ತಮ್ಮ ಚಟುವಟಿಕೆಗಳನ್ನು ಇಲ್ಲಿಂದಲೇ ಆರಂಭಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲೆಯ ಪ್ರತಿಯೊಂದು ಬೆಳವಣಿಗೆ ಹಾಗೂ ಕಾರ್ಯವೈಖರಿಯನ್ನು ನಿರಂತರವಾಗಿ ಮೇಲ್ವಿಚಾರಣೆ  

ಮಾಡಬೇಕು. ತಾಲೂಕು ಮಟ್ಟದಲ್ಲಿ 'ಪ್ರಜಾಸೇವೆ' ಕಾರ್ಯಕ್ರಮಗಳು ನಡೆಯಲಿವೆ. ಈಗಾಗಲೇ ಹಲವು ಬಾರಿ ಜಿಲ್ಲೆಗೆ ಭೇಟಿ ನೀಡಲಾಗಿದ್ದು, ಮುಂಬರುವ ಶುಕ್ರವಾರ ಮತ್ತು ಶನಿವಾರದಂದು ಮತ್ತೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಅಧಿಕಾರಿಗಳ ಕಾರ್ಯವೈಖರಿಯನ್ನು ಹತ್ತಿರದಿಂದ ಗಮನಿಸಲಾಗುತ್ತಿದ್ದು, ಪ್ರತಿಯೊಬ್ಬ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯಿಂದ ಸಾರ್ವಜನಿಕರ ಕೆಲಸಗಳನ್ನು ನಿರ್ವಹಿಸಬೇಕು ಸಚಿವರು ‌ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಮಾಜಿ ಸಚಿವರು ಹಾಗೂ ಹಾಲಿ‌ ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್.ಭೋಸರಾಜು, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಜಿಲ್ಲಾಧಿಕಾರಿ ಪೂವಿತಾ ಎಸ್. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹೊಪಾತ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ಅಪರ ಜಿಲ್ಲಾಧಿಕಾರಿ ಶಿವಾನಂದ, ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್, ಬಸವಣ್ಣೆಪ್ಪ ಕಲಶೆಟ್ಟಿ, ಜಿಲ್ಲಾ ಪಂಚಾಯತ್ ಉಪ‌ ಕಾರ್ಯದರ್ಶಿ ಹಾಲ ಸಿದ್ದಪ್ಪ ಪೂಜಾರಿ, ಲೆಕ್ಕಾಧಿಕಾರಿ‌ ವಿಜಯಶಂಕರ್, ರಾಯಚೂರು ‌ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ತಿಮ್ಮಪ್ಪ ಬಿರಾದಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌವ್ಹಾಣ್ ಸೇರಿದಂತೆ ಜಿಲ್ಲೆಯ ‌ವಿವಿಧ ತಾಲೂಕಿನ ತಹಶಿಲ್ದಾರರು, ತಾಲೂಕು ಪಂಚಾಯತ್ ‌ಕಾರ್ಯನಿರ್ವಾಹಕ ಅಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.

Comments

Popular posts from this blog