ನಾಳೆ ನಗರ ಉಪ ವಿಭಾಗ-2ರಲ್ಲಿ ವಿದ್ಯುತ್ ವ್ಯತ್ಯಯ
ಜಯ ಧ್ವಜ ನ್ಯೂಸ್ ,ರಾಯಚೂರು ಸೆ.2- ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-2ರ ವ್ಯಾಪ್ತಿಯ 110ಕೆವಿ ಮೇಸ್ ವಡವಟ್ಟಿ ಉಪ ಕೇಂದ್ರದಲ್ಲಿ ವಿದ್ಯುತ್ ಮಾರ್ಗದ ದುರಸ್ತಿ ಹಾಗೂ ಸುಧಾರಣೆ ಕಾಮಗಾರಿಯನ್ನು ನಿರ್ವಹಿಸುವ ಪ್ರಯುಕ್ತ ಸೆಪ್ಟಂಬರ್ 03ರ ಗುರುವಾರ ಬೆಳಿಗ್ಗೆ 11ರಿಂದ ಸಾಯಂಕಾಲ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.
ಅಂದು ಬೆಳಿಗ್ಗೆ 11ರಿಂದ ಹರಿಜನ ವಾಡ, ಕೊಲ್ಮಿ, ಫಾರೂಖ್ ಅನ್ವರ ಕಂಪನಿ, ವಾಸವಿ ನಗರ, ಹನುಮಾನ ಟಾಕೀಸ್, ಗಾಜಗಾರಪೇಟೆ, ನೇತಾಜಿ ನಗರ, ರಾಘವೇಂದ್ರ ಸ್ವಾಮಿ ಮಠ, ಜವಾಹರ್ ನಗರ ಸೇರಿದಂತೆ ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಹಕರ ನಿರಂತರ ಸೇವಾ ಕೇಂದ್ರದ ದೂರವಾಣಿ ಸಂಖ್ಯೆ: 08532-226386, 08532-231999ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments
Post a Comment