ಲಿಂಗಸ್ಗೂರಿನಲ್ಲಿ ಬಳ್ಳಾರಿ ಚಲೋ ಪಾದಯಾತ್ರೆ ಉದ್ಘಾಟನೆ

 ಕಾಂಗ್ರೆಸ್ ಸರಕಾರ ಕಿತ್ತೊಗೆಯಲು ಹೋರಾಟ- ಯಡಿಯೂರಪ್ಪ


 ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.1- ಪಾದಯಾತ್ರೆಯು 6 ಕೋಟಿ ಕನ್ನಡಿಗರ ಆಶೋತ್ತರದ ಕಹಳೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು 

ಅವರಿಂದು ಲಿಂಗಸ್ಗೂರಿನಲ್ಲಿ ಬಿಜೆಪಿ  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದ ಬಳ್ಳಾರಿ ಚಲೋ ಪಾದಯಾತ್ರೆಯ ಉದ್ಘಾಟನೆಯನ್ನು ಕಹಳೆ ಊದುವ ಮೂಲಕ   ನೆರವೇರಿಸಿದರು . ನಂತರ  ಮಾತನಾಡಿದ ಯಡಿಯೂರಪ್ಪ ಅವರು, ಅಧಿಕಾರದ ಮದದಲ್ಲಿ ಮೆರೆಯುವ ರೈತ ವಿರೋಧಿ, ಜನವಿರೋಧಿ, ಪ್ರಗತಿವಿರೋಧಿ, ಮಹಿಳಾ ವಿರೋಧಿ, ಭ್ರಷ್ಟಾಚಾರದಲ್ಲಿ ತೊಡಗಿದ ಈ ಸರಕಾರವನ್ನು ಕಿತ್ತೊಗೆಯುವ ವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು. ಭ್ರಷ್ಟ ಕಾಂಗ್ರೆಸ್ ಸರಕಾರ ಕಿತ್ತೊಗೆಯುವ ಸಂಕಲ್ಪದೊಂದಿಗೆ ಹೋರಾಟ ಪ್ರಾರಂಭವಾಗಿದೆ ಎಂದರು. ಮುಖ್ಯಮಂತ್ರಿಗಳಿಗೆ ಸ್ವಾತಂತ್ರ್ಯ ಇದೆಯೇ? ಪ್ರತಿಯೊಂದಕ್ಕೂ ದೆಹಲಿಗೆ ಹೋಗಿ ರಾಹುಲ್ ಗಾಂಧಿ ಕಾಲು ಹಿಡಿಯುವ ನೀವು ಮುಖ್ಯಮಂತ್ರಿಯೇ ಎಂದು ಪ್ರಶ್ನಿಸಿದರು. ಇದು ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುತ್ತದೆಯೇ ಎಂದು ಕೇಳಿದರು.


ಪಾದಯಾತ್ರೆಗೆ ಜನರು ಬೆಂಬಲಿಸಲು  ಮನವಿ ಮಾಡಿದರು. ಇದು ಹೋರಾಟದ ಮೊದಲ ಹೆಜ್ಜೆ. ಭ್ರಷ್ಟ ಸರಕಾರಕ್ಕೆ ಲೂಟಿ ವಿರುದ್ಧ ಮನವರಿಕೆ ಮಾಡೋಣ ಎಂದು ತಿಳಿಸಿದರು.

 ಬರ ಪ್ರದೇಶ ಘೋಷಣೆಯಲ್ಲಿ ರಾಜ್ಯ ಸರಕಾರ ಅನ್ಯಾಯ ಮಾಡಿದೆ. ಪರಿಹಾರ ನೀಡುವಲ್ಲಿ ಕ್ರಮ ಕೈಗೊಂಡಿಲ್ಲ; ಪಾದಯಾತ್ರೆಯ ಒಂದೊಂದು ಹೆಜ್ಜೆಯೂ ಬಿಜೆಪಿ ರೈತಪರವಾಗಿದೆ. ಬಿಜೆಪಿ ಹೆಜ್ಜೆಯಲ್ಲಿ ದಲಿತ ಧ್ವನಿಯಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ,ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಸಿ.ಟಿ.ರವಿ, ಬಿ.ಶ್ರೀರಾಮುಲು, ಜನಾರ್ಧನ ರೆಡ್ಡಿ, ಗೋವಿಂದ ಕಾರಜೋಳ,ಅರವಿಂದ್ ಬೆಲ್ಲದ,ಶಶೀಲ್ ನಮೋಶಿ,




ಮಾನಪ್ಪ ವಜ್ಜಲ್,  ರಾಜುಗೌಡ, ಶಿವನಗೌಡ ನಾಯಕ, ಬಿ.ನಿ.ನಾಯಕ, ಡಾ.ಶಿವರಾಜ ಪಾಟೀಲ್, ತಿಪ್ಪರಾಜು ಹವಾಲ್ದಾರ್, ವೀರನಗೌಡ ಲೆಕ್ಕಿಹಾಳ, ಸೇರಿದಂತೆ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

ಬಿಜೆಪಿ 
ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಕಾರ್ಯಕ್ರಮ ನಿರೂಪಿಸಿದರು.ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು 







Comments

Popular posts from this blog