ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಸಾಂದೀಪನಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ


ಜಯ ಧ್ವಜ ನ್ಯೂಸ್ ,ರಾಯಚೂರು ಸೆ.1- ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯ ವೇತನ ಯೋಜನೆಯಡಿ 2026-27ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಂಡಳಿಯು ಸಾಂದೀಪನಿ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ರಾಜ್ಯ ಇ-ಆಡಳಿತ ಇಲಾಖೆಯ ರಾಜ್ಯ ಶಿಷ್ಯವೇತನ ತಂತ್ರಾಂಶದ ಮೂಲಕ ಜಾರಿಗೊಳಿಸಲಾಗಿದೆ. ಸಾಂದೀಪನಿ ಶಿಷ್ಯವೇತನದಲ್ಲಿ ಪ್ರಥಮ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ಪದವಿ ಕೋರ್ಸ್ಗಳನ್ನು ವ್ಯಾಸಂಗ ಮಾಡುತಿರುವ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ನಿರ್ವಹಣಾ ವೆಚ್ಚ ರೂ.15,000/- ದಂತೆ ಶಿಷ್ಯವೇತನ ಹಾಗೂ ಸಿಇಟಿ, ನೀಟ್ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದ 2/3 ಭಾಗದ ಮೊತ್ತವನ್ನು ಮರುಪಾವತಿ ಮಾಡಲಾಗುವುದು.

ಶಿಷ್ಯವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದೆ ವಿದ್ಯಾರ್ಥಿಗಳು ಚಾಲ್ತಿಯಲ್ಲಿರುವ ಆರ್ಥಿಕವಾಗಿ ವಾಗಿ ಹಿಂದುಳಿದ ಪ್ರಮಾಣಪತ್ರ (ಇಡ್ಬೂಎಸ್) ಪ್ರಮಾಣ ಪತ್ರ 8 ಲಕ್ಷ ರೂ.ಆದಾಯ ಮಿತಿ)ಹೊಂದಿರಬೇಕು. ವೃತ್ತಿಪರ ಕೋರ್ಸ್ಗಳಿಗೆ ಮ್ಯಾನೇಜ್ಮೆಂಟ್ ಕೋಟಾ ಅಥವಾ ಕಾಮೆಡ್-ಕೆ ರಿ ಪ್ರವೇಶಾತಿ ಪಡೆದ ವಿದ್ಯಾರ್ತಿಗಳು ಶುಲ್ಕ ಮರುಪಾವತಿಗೆ ಅರ್ಹರಿರುವುದಿಲ್ಲ. ವಿದ್ಯಾರ್ಥಿಗಳ ಆಧಾರ್‌ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ  ರಡಿ ಸೀಡ್ ಆಗಿರಬೇಕು.

 ಅರ್ಜಿಯನ್ನು ದಿನಾಂಕ:31.12.2026ರ ಒಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 8029605888/ 8762249230ಗೆ ಕಚೇರಿಯ ಸಮಯದಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರಾಜಶೇಖರ್ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 

Comments

Popular posts from this blog