ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ ಅಂಗವಾಗಿ ಸೆ.11 ಹಾಗೂ 12 ರಂದು ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆ ಆಯೋಜನೆ
ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.8- ಪತ್ರಕರ್ತರ ಹಿತಾಸಕ್ತಿ ಹಾಗೂ ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ‘ರಾಯಚೂರು ರಿಪೋರ್ಟರ್ಸ್ ಗಿಲ್ಡ್ (ರಿ)’ ಸಂಸ್ಥೆ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿ ಮಹೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಬೆಳ್ಳಿ ಮಹೋತ್ಸವದ ಅಂಗವಾಗಿ ಪದವಿ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಯುವಜನತೆ, ಮಾಧ್ಯಮ ಕ್ಷೇತ್ರದ ಬದಲಾವಣೆ ಹಾಗೂ ಸಾಮಾಜಿಕ ಮಾಧ್ಯಮಗಳಿಂದ ಎದುರಾಗುತ್ತಿರುವ ಸವಾಲುಗಳ ಕುರಿತು ವಿದ್ಯಾರ್ಥಿಗಳಲ್ಲಿ ಚಿಂತನೆ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.
ಸೆ.11ರಂದು ಪತ್ರಿಕಾ ಭವನದ ಮೇಲ್ಮಹಡಿಯಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದ್ದು. *ಮಾಧ್ಯಮಗಳು ಮತ್ತು ಪ್ರಜಾಪ್ರಭುತ್ವ: ಇಂದಿನ ಸವಾಲುಗಳು ಹಾಗೂ ನೈತಿಕತೆ* ’ ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆ ನಡೆಯಲಿದೆ.
ಸೆ.12ರಂದು ಭಾಷಣ ಸ್ಪರ್ಧೆ ನಡೆಯಲಿದ್ದು ವಿಷಯ : ‘ *ಸಾಮಾಜಿಕ ಮಾಧ್ಯಮಗಳು ಮತ್ತು ಜೆನ್ ಜಿ: ಜಾಗೃತಿಯೋ ಅಥವಾ ಗೊಂದಲವೋ?’ ಎಂಬ ವಿಷಯದ ಕುರಿತು ಸೆಪ್ಟೆಂಬರ್ 12ರಂದು ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ.*
ಈ ಸ್ವರ್ಧೆಗೆ ಪ್ರತಿ ಕಾಲೇಜಿನಿಂದ ಪ್ರತಿ ಸ್ವರ್ಧೆಗೆ 4 ವಿದ್ಯಾರ್ಥಿಗಳು ಭಾಗವಹಿಸಬಹುದು. ಪ್ರಬಂಧ ಸ್ಪರ್ಧೆಗೆ ವಿದ್ಯಾರ್ಥಿಗಳೇ ಎಕ್ಸಾಂ ಪ್ಯಾಡ್ ತರತಕ್ಕದ್ದು.
ಪ್ರಥಮ ಬಹುಮಾನ : 5,000 ,ದ್ವಿತೀಯ ಸ್ಥಾನ : 3,000
ತೃತೀಯ ಸ್ಥಾನ : 2,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
ಪದವಿ ಮಹಾವಿದ್ಯಾಲಯಗಳಿಂದ ವಿದ್ಯಾರ್ಥಿಗಳನ್ನು ಸ್ಪರ್ಧೆಗೆ ಕಳುಹಿಸಿ ಕೊಡಬೇಕೆಂದು ಈ ಮೂಲಕ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9148245011 ಗೆ ಸಂಪರ್ಕಿಸಬಹುದು ಎಂದು ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಅಧ್ಯಕ್ಷರಾದ ವಿಜಯ್ ಜಾಗಟಗಲ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೂಗಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments
Post a Comment