ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿಮಹೋತ್ಸವ : ಪದವಿ ವಿದ್ಯಾರ್ಥಿಗಳ ಭಾಷಣ ಸ್ಪರ್ಧೆಗೆ ಬಸವರಾಜ್ ನಾಗಡದಿನ್ನಿ ಚಾಲನೆ
ಜಯ ಧ್ವಜ ನ್ಯೂಸ್ ,ರಾಯಚೂರು ಸೆ.12- ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತನ್ನ ಇಂದಿನ ಯುವ ಪೀಳಿಗೆ ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಬಸವರಾಜ್ ನಾಗಡದಿನ್ನಿ ಹೇಳಿದರು.
ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆ ಹಿನ್ನೆಲೆ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ "ಸಾಮಾಜಿಕ ಮಾಧ್ಯಮಗಳು ಮತ್ತು ಜೆನ್ ಜಿ: ಜಾಗೃತಿಯೋ ಅಥವಾ ಗೊಂದಲವೋ?" ವಿಷಯ ಕುರಿತು ಪದವಿ ವಿದ್ಯಾರ್ಥಿಗಳ ಭಾಷಣ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೆನ್ ಜಿ ಎಂಬುದು ಇತ್ತೀಚೆಗೆ ಬಹಳ ಪ್ರಭಾವಿತ ಪದವಾಗಿದೆ. ಶಿಕ್ಷಣವನ್ನು ಸಾರ್ವತ್ರಿಕವಾಗಿ ಮಾಡಿ ಯುವ ಸಮಾಜ ಕಟ್ಟವುದು ಜೆನ್ ಜಿ ಕಲ್ಪನೆಯಾಗಿದ್ದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತೆ ನೋಡಬೇಕಿದೆ ಎಂದರು.ರಾಯಚೂರು ರಿಪೋರ್ಟರ್ಸ್ ಗಿಲ್ಡ್ ತಮ್ಮ ಬೆಳ್ಳಿ ಮಹೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸುತ್ತಿದೆ, ಈ ರೀತಿ ಸ್ಪರ್ಧೆಗಳ ಆಯೋಜನೆಗಳು ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗಲಿದೆ ಅಂತ ಹೇಳಿದರು.
ಮಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆ ಮುಖ್ಯಸ್ಥ ವಿರೇಶ್ ರಾಜಗುರು ಪ್ರಬಂಧ, ಭಾಷಣ ಸ್ಪರ್ಧೆಗಳಂತ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ರಾಯಚೂರು ರಿಪೋರ್ಟರ್ಸ್ ಒಳ್ಳೆಯ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದಾರೆ ಎಂದರು.
ಹಿರಿಯ ಪತ್ರಕರ್ತ ಶಿವಮೂರ್ತಿ ಹಿರೇಮಠ್ ಮಾತನಾಡಿ ವಿದ್ಯಾರ್ಥಿಗಳು ಅಂಕಗಳಿಗೆ ಮಾತ್ರವಲ್ಲ ಮಾತುಗಾರಿಕೆಗೂ ಸಹ ಒತ್ತು ನೀಡಬೇಕೆಂದು ಕಿವಿಮಾತು ಹೇಳಿದರು. ಸಂದರ್ಶನ ಎದುರಿಸುವ ಕೌಶಲ್ಯದಲ್ಲಿ ನಮ್ಮಲ್ಲಿಯ ವಿದ್ಯಾರ್ಥಿಗಳು ಹಿಂದೆ ಇದ್ದಾರೆ, ಶಬ್ಧ ಭಂಡಾರ, ವಾಕ್ಯ ರಚನೆಯನ್ನು ರೂಪಿಸಿಕೊಳ್ಳಬೇಕು ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿ ಕುಕನೂರು ಮಾತನಾಡಿ ಜೆನ್ ಜಿ ಗಳ ದೃಷ್ಟಿಯಲ್ಲಿ ನಮ್ಮ ದೇಶದ ಪರಿಕಲ್ಪನೆಯಲ್ಲಿ ಬಹಳ ಸುಂದರವಾಗಿದೆ. ಜಾತ್ಯತೀತ, ಭ್ರಷ್ಟರಹಿತ, ಪ್ರತಿಭೆ ಆಧಾರಿತ ದೇಶ ಬೇಕೆನ್ನುವ ಭಾವನೆಯಲ್ಲಿ ಜೆನ್ ಜಿಗಳಿದ್ದಾರೆ. ಕಳೆದ 20 ವರ್ಷದಲ್ಲಿ ಜಗತ್ತಿನಲ್ಲಿ ಸಾಮಾಜಿಕ ಜಾಲತಾಣಗಳಿಂದ ಕ್ರಾಂತಿಯೇ ಸೃಷ್ಟಿಯಾಗುತ್ತಿದೆ. ಆದರೆ, ಸೋಷಿಯಲ್ ಮೀಡಿಯಾಗಳನ್ನು ಜೆನ್ ಜಿಗಳು ಬಳಸುವಾಗ ಬಹಳ ಎಚ್ಚರಿಕೆ ವಹಿಸಬೇಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸಂದೇಶಗಳನ್ನು ಪರಾಮರ್ಶೆ ಮಾಡಿ ಅನುಸರಿಸುವುದು ಸೂಕ್ತ ಎಂದು ಹೇಳಿದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ್ ಜಾಗಟಗಲ್ ಮಾತನಾಡಿ ಗಿಲ್ಡ್ ಬೆಳ್ಳಿ ಮಹೋತ್ಸವ ಹಿನ್ನೆಲೆ ಸರಣಿ ಕಾರ್ಯಕ್ರಮಗಳನ್ನ ಆಯೋಜಿಸಲಾಗುತ್ತಿದ್ದು. ವಿದ್ಯಾರ್ಥಿಗಳಿಗಾಗಿ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನ ಏರ್ಪಡಿಸಲಾಗಿದೆ. ಪದವಿ ವಿದ್ಯಾರ್ಥಿಗಳು ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮನ್ನ ಅರಿತುಕೊಂಡ ರೀತಿ ಬಳಸುತ್ತಿರುವ ರೀತಿಗಳ ಬಗ್ಗೆ ಚರ್ಚೆಗಳು ಅಗತ್ಯವಿದ್ದು. ಈ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.
ಹಿರಿಯ ಪತ್ರಕರ್ತರಾದ ರಘುನಾಥ್ ರೆಡ್ಡಿ ಮನ್ಸಲಾಪೂರ, ವೀರನಗೌಡ , ಸುರೇಶ್ ರೆಡ್ಡಿ ,ನಿವೃತ್ತ ಶಿಕ್ಷಕ ರಮೇಶ್ ಬೌಯರ್ ಭಾಷಣ ಸ್ಪರ್ಧೆ ನಿರ್ಣಾಯಕರಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಗಿಲ್ಡ್ ಕಾರ್ಯಕಾರಿ ಸಮಿತಿ ಸದಸ್ಯ ಖಾನ್ ಸಾಬ್ ಮೋಮಿನ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ್, ಅಮರೇಶ್ ಸಜ್ಜನ್ ಸೇರಿ ಹಲವರು ಭಾಗವಹಿಸಿದ್ದರು. ಗಿಲ್ಡ್ ಜಂಟಿ ಕಾರ್ಯದರ್ಶಿ ಶ್ರೀಕಾಂತ್ ಸಾವೂರ್ ಸ್ವಾಗತಿಸಿದರು, ಮಲ್ಲನಗೌಡ ಕಾರ್ಯಕ್ರಮ ಸಂಯೋಜಿಸಿ ನಿರೂಪಣೆ ಮಾಡಿದರು.




Comments
Post a Comment