ವಿಧಾನ ಪರಿಷತ್ ಚುನಾವಣೆ:
ಮಟ್ಟೂರು ಪರ ವಸಂತಕುಮಾರ್ ಮತಯಾಚನೆ
.                                                   ಜಯ‌ ಧ್ವಜ ನ್ಯೂಸ್ , ರಾಯಚೂರು, ಅ.18- ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿ, ವಿಧಾನ ಪರಿಷತ್ ಸದಸ್ಯ‌ ಹಾಗೂ ಕೆಪಿಸಿಸಿ‌ ಕಾರ್ಯಾಧ್ಯಕ್ಷರಾದ ಎ.ವಸಂತಕುಮಾರ ಅವರು ನಿನ್ನೆ‌ ವಿವಿಧ ಪದವಿ ಕಾಲೇಜುಗಳ ಉಪನ್ಯಸಕರನ್ನು ಹಾಗೂ ಪ್ರೌಡ ಶಾಲೆಗಳ‌ಶಿಕ್ಷಕರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯ ದ ಮತ ನೀಡಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದ ಎ.ವಸಂತಕುಮಾರ ಅವರು ಕಾಂಗ್ರೆಸ್ ಪಕ್ಷದ ಸರಕಾರವು ಈ ಭಾಗದ ಪದವಿ ಕಾಲೇಜುಗಳ ಉಪನ್ಯಾಸಕರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪರಿಹರಿಸುತ್ತಿದೆ, ವಿಶೇಷವಾಗಿ ಅತಿಥಿ ಉಪನ್ಯಾಕರ ನೇಮಕಾತಿ‌ ಮತ್ತು ಗೌರವಧನ ಬಿಡುಗಡೆಗೆ ಕ್ರಮವಹಿಸಲಾಗುತ್ತಿದೆ, ಖಾಸಗಿ ಕಾಲೇಜುಗಳ ಅನುಮತಿ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲಾಗುತ್ತಿದೆ.


ಪದವಿ ಮಹಾವಿದ್ಯಾಲಯದಲ್ಲಿ ಮತ್ತು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಪಾರದರ್ಶಕ ಮಾದರಿಯಲ್ಲಿ ಭರ್ತಿ ಮಾಡಲು ಕ್ರಮ ಜರುಗಿಸಲಾಗುತ್ತಿದೆ. ಶಿಕ್ಷಕರ ಹಕ್ಕುಗಳ ರಕ್ಷಣೆ, ವೃತ್ತಿಪರ ಗೌರವ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಬದ್ದವಾಗಿದೆ ಎಂದು ಹೇಳಿದರು. ಸಂವಿಧಾನದ ಅನುಚ್ಚೇಧ 371J ಅಡಿಯಲ್ಲಿ  ಈ ಭಾಗದ ಖಾಲಿ‌ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸರಕಾರ ಈಗಾಗಲೇ ಕ್ರಮವಹಿಸಿದೆ.

ನಮ್ಮ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು ಒಂದು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಕರ ಪರವಾಗಿ ಪರಿಣಾಮ ಕಾರಿಯಾಗಿ ಕೆಲಸ ಮಾಡಿರುತ್ತಾರೆ.  ಇನ್ನೂ ಹೆಚ್ಚಿನ ಕೆಲಸ‌ ಮಾಡಲು ಮತ್ತೊಮ್ಮೆ ಪ್ರಥಮ ಪ್ರಾಶಸ್ತ್ಯ ದ ಮತವನ್ನು ನೀಡಿ ಗೆಲ್ಲಿಸಬೇಕೆಂದು ಈ ಮೂಲಕ ಕೋರಿದರು.

ಈ ಸಂದರ್ಭದಲ್ಲಿ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಕರೀಮ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಬಸವರಾಜ ದರೂರು, ಜಿಲ್ಲಾ ಕಾಂಗ್ರೆಸ್ ಸಮಿತಿ‌ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ನಾಯಕ, ಕೆಪಿಸಿಸಿ ವಕ್ತಾರ ಡಾ.ರಝಾಕ ಉಸ್ತಾದ, ಜೆ.ಸತ್ಯನಾಥ,ವಿವಿ ವಿದ್ಯಾ ವಿಷೇಯಕ ಪರಿಷತ್ ಸದಸ್ಯ ರಮೇಶ ರೋಸ್ಲಿ, ಬೆಂಜಮೀನ ಥಾಮಸ್ ಹಾಗೂ ಇತರರು ಉಪಸ್ಥಿತರಿದ್ದರು.

Comments

Popular posts from this blog