ವಿಧಾನ ಪರಿಷತ್ ಚುನಾವಣೆ:               
ರಿಮ್ಸ್ ನಲ್ಲಿ ಶರಣಪ್ಪ ಮಟ್ಟೂರು ಪರ ವಸಂತಕುಮಾರ್ ಪ್ರಚಾರ. 
                                                ಜಯ ಧ್ವಜ ನ್ಯೂಸ್ , ರಾಯಚೂರು , ಅ.19- ಈಶಾನ್ಯ ಶಿಕ್ಷಕರ‌ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿಲ್ಲೆಯಲ್ಲಿ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮತದಾರರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೆಕೇಂದು ಕೆಪಿಸಿಸಿ‌ ಕಾರ್ಯಾಧ್ಯಕ್ಷರು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ ಅವರು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ‌ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರು ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು, ಶಿಕ್ಷಕರ ಹಕ್ಕುಗಳನ್ನು ರಕ್ಷಿಸಲು ನಿರಂತರ ಪ್ರಯತ್ನ ಪಡುತ್ತ‌ ಬಂದಿದ್ದಾರೆ. ಅವರಿಗೆ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಸಂಪೂರ್ಣವಾಗಿ ತಿಳಿದಿದ್ದು,‌ ಹಂತ‌ಹಂತವಾಗಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗುವದು ಎಂದು ಹೇಳಿದರು.


ಕರ್ನಾಟಕ ಸರಕಾರವು ಈ ಭಾಗದ ಶಿಕ್ಷಣ ಸಂಸ್ಥೆಗಳ ಹಾಗೂ ಶಿಕ್ಷಕರಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸುತ್ತಿದೆ, ಈಗಾಗಲೇ ಈ ಭಾಗದಲ್ಲಿ ಖಾಲಿ ಇರುವ ಸುಮಾರು 7000 ಸಾವಿರ ಶಿಕ್ಷಕರ‌ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಿದ್ದು,  371ಜೆ ಅಡಿಯಲ್ಲಿ ಈ ಭಾಗದಲ್ಲಿ ಖಾಲಿ‌ ಇರುವ ಸುಮಾರು 32000 ವಿವಿಧ ಇಲಾಖೆಯ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಣಯಿಸಿದೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಈ ಭಾಗದಲ್ಲಿ ಅಕ್ಷರ ಅವಿಷ್ಕಾರ ಹೆಸರಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ.

ಈ ಸಂದರ್ಭದಲ್ಲಿ ಕೆಪಿಸಿಸಿ‌ ವಕ್ತಾರ ಡಾ.ರಝಾಕ ಉಸ್ತಾದ,  ಮಹಾನಗರ ಪಾಲಿಕೆ ಮಾಜಿ ಸದಸ್ಯ ಬಸವರಾಜ ದರೂರು, ರಾಮಕೃಷ್ಣ ನಾಯಕ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಅಸ್ಲಂ ಪಾಶಾ, ಜೆ.ಸತ್ಯನಾಥ ಸೇರಿದಂತೆ ಇತರರು ಉಪಸ್ಥಿತರಿದ್ದರು.

Comments

Popular posts from this blog