ವಿಧಾನ ಪರಿಷತ್ ಚುನಾವಣೆ ನಾಳೆ ಮತದಾನ ಜಿಲ್ಲಾಧಿಕಾರಿಗಳಿಂದ ಸಿದ್ಧತೆ ಪರಿಶೀಲನೆ                                               ಜಯ ಧ್ವಜ ನ್ಯೂಸ್ , ರಾಯಚೂರು, ಅ.22- ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಒಂದು ಸ್ಥಾನಕ್ಕೆ ಅಕ್ಟೋಬರ್ 23 ರಂದು  ನಡೆಯಲಿರುವ ಮತದಾನದ ಹಿನ್ನೆಲೆಯಲ್ಲಿ ಇಂದು ಸಂಜೆ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಾದ ಪೂವಿತಾ ಎಸ್.

ಅವರು ರಾಯಚೂರು ಜಿಲ್ಲೆಯ ಗಬ್ಬೂರ. ಜಾಲಹಳ್ಳಿ ಹಾಗೂ ದೇವದುರ್ಗ ಸೇರಿದಂತೆ ಇತರೆ ಮತದಾನ ಕೇಂದ್ರಗಳಿಗೆ ತೆರಳಿ ಅಲ್ಲಿನ ಪೂರ್ವ ಸಿದ್ದತೆಗಳ ಪರಿಶೀಲನೆ ನಡೆಸಿ ಮತದಾನಕ್ಕೆ ಎಲ್ಲಾ ಅಗತ್ಯ ಸಿದ್ದತೆಗಳು ಮಾಡಿಕೊಳ್ಳುವ ಮೂಲಕ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು ಮತ್ತು ಜಿಲ್ಲೆಯಲ್ಲಿ ಮತದಾನ ಸುಸೂತ್ರವಾಗಿ ನಡೆಯಬೇಕೆಂದು  ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

Comments

Popular posts from this blog