ಉಪ್ಪಾರವಾಡಿ ಶ್ರೀಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದಂಗವಾಗಿ ಸಿಂಹ ವಾಹನೋತ್ಸವ .
ಜಯ ಧ್ವಜ ನ್ಯೂಸ್ ರಾಯಚೂರು,ಆ..14- ನಗರದ ಉಪಾರವಾಡಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ವರ್ಷದ ನವರಾತ್ರಿ ಉತ್ಸವವನ್ನು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತಿದೆ.
ಇಂದು 14ರಂದು ಬುದುವಾರ ಚಂದ್ರ ವಾಹನೋತ್ಸವ ಜರುಗಿತು. ಈ ವಾಹನವು ಶ್ರೀಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಿಂದ ಭಜನೆ, ಕಳಸದೊಂದಿಗೆ ಗೀತಾಮಂದಿರ ರೋಡಿನವರೆಗೆ ತೆರಳಿ ಮರಳಿ ದೇವಸ್ಥಾನಕ್ಕೆ ಆಗಮಿಸಿತು.
ನಂತರ ಆರ್ಚಕರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು. ನಂತರ ಪ್ರಸಾದ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು, ಬಡಾವಣೆಯ ಹಿರಿಯರು, ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.


Comments
Post a Comment