ಅ.17 ರಂದು ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ
ಜಯ ಧ್ವಜ ನ್ಯೂಸ್ , ರಾಯಚೂರು, ಅ. 15- ಪ್ರತಿ ವರ್ಷದಂತೆ ಈ ವರ್ಷವು ನ.1 ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸುವ ಕುರಿತಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 17ರ ಬೆಳಿಗ್ಗೆ 11ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಕನ್ನಡ ಪರ ಸಂಘಟನೆಯ ಮುಖಂಡರು ಭಾಗವಹಿಸಿ, ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments
Post a Comment