ವಾಲ್ಮೀಕಿ ವಿವಿ ಕುಲಸಚಿವರು (ಮೌಲ್ಯಮಾಪನ) ಡಾ.ವಿರುಪಾಕ್ಷಯ್ಯ ಅಧಿಕಾರ ಸ್ವೀಕಾರ:
ತ್ವರಿತ ಹಾಗೂ ಗುಣಮಟ್ಟದ ಪರೀಕ್ಷೆ ಕಾರ್ಯಗಳಿಗೆ ಪ್ರಥಮ ಪ್ರಾಶಸ್ತ್ಯ - ಡಾ.ವಿರುಪಾಕ್ಷಯ್ಯ ಡಿಬಿಎಂ
ಜಯ ಧ್ವಜ ನ್ಯೂಸ್ ,ರಾಯಚೂರು,ನ.೧೨-
ಹೊಸ ಶಿಕ್ಷಣ ನೀತಿಯಂತೆ ತ್ವರಿತ ಹಾಗೂ ಗುಣಮಟ್ಟದ ಪರೀಕ್ಷೆ ಕಾರ್ಯಗಳಿಗೆ ಮೊದಲ ಪ್ರಾಶಸ್ತ್ಯ ನೀಡಲು ಶ್ರಮಿಸುವುದಾಗಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಸಚಿವ (ಮೌಲ್ಯಮಾಪನ) ಡಾ.ವಿರುಪಾಕ್ಷಯ್ಯ ಡಿಬಿಎಂ ಅವರು ಹೇಳಿದರು.
ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಪರೀಕ್ಷಾಂಗ ಕಚೇರಿಯಲ್ಲಿ ಬುಧವಾರ ಕಡತಕ್ಕೆ ಸಹಿ ಹಾಕುವ ಮೂಲಕ ದಾವಣೆಗೆರೆ ವಿಶ್ವವಿದ್ಯಾಲಯದಲ್ಲಿ ಸೂಕ್ಷö್ಮಜೀವಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸುತ್ತಿದ್ದ ಇವರು ಮೌಲ್ಯಮಾಪನ ವಿಭಾಗದ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ನೈತಿಕ ಸ್ಥೆöÊರ್ಯ ತುಂಬಿ ಎರಡೂ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿಯ ಎಲ್ಲಾ ಪದವಿ ಕಾಲೇಜುಗಳ ಗುಣಮಟ್ಟ ಹೆಚ್ಚಿಸುವುದರೊಂದಿಗೆ ವಿಶ್ವವಿದ್ಯಾಲಯದ ಏಳ್ಗೆಗೆ ಸಕಲ ರೀತಿಯ ಪ್ರೋತ್ಸಾಹ ನೀಡಲಾಗುವುದು. ಹೊಸ ಶಿಕ್ಷಣ ನೀತಿಯಂತೆ ಪ್ರವೇಶ, ಆಡಳಿತ, ಪರೀಕ್ಷಾ ವಿಭಾಗದಲ್ಲಿ ಸಮಗ್ರ ಸುಧಾರಣೆ ತರಲು ಯತ್ನಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು ನೂತನ ಕುಲಸಚಿವರು(ಮೌಲ್ಯಮಾಪನ) ಅವರನ್ನು ಸ್ವಾಗತಿಸಿ, ಅಭಿನಂದಿಸಿದರು. ಕುಲಸಚಿವರಾದ ಡಾ.ಎ.ಚನ್ನಪ್ಪ, ಹಣಕಾಸು ಅಧಿಕಾರಿ ಡಾ.ಸುಯಮೀಂದ್ರ ಕುಲಕರ್ಣಿ, ಉಪಕುಲಸಚಿವ ಡಾ.ಕೆ.ವೆಂಕಟೇಶ, ಡೀನರಾದ ಶಿಕ್ಷಣ ನಿಕಾಯದ ಪ್ರೊ.ಪಾರ್ವತಿ ಸಿ.ಎಸ್., ವಾಣಿಜ್ಯ ನಿಕಾಯದ ಪ್ರೊ.ಪಿ.ಭಾಸ್ಕರ್, ಕಲಾ ನಿಕಾಯದ ಡಾ.ಲತಾ, ಗ್ರಂಥಪಾಲಕ ಡಾ.ಜಿ.ಎಸ್.ಬಿರಾದಾರ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಯವರು ನೂತನ ಕುಲಸಚಿವ (ಮೌಲ್ಯಮಾಪನ) ಅವರಿಗೆ ಸ್ವಾಗತಿಸಿ ಸನ್ಮಾನಿಸಿ ಗೌರವಿಸಿದರು.

Comments
Post a Comment