ದಾಸ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಪ್ರಯುಕ್ತ ಕನಕದಾಸರ ಪುತ್ಥಳಿಗೆ ಗಣ್ಯರಿಂದ ಮಾಲಾರ್ಪಣೆ ರಾಯಚೂರು,ನ.18- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ್ದ ಸಂತಕವಿ ದಾಸ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಪ್ರಯುಕ್ತ ನಗರದ ಗಂಜ್ ಸರ್ಕಲ್ ಹತ್ತಿರವಿರುವ ಕನಕದಾಸರ ಪುತ್ಥಳಿಗೆ ಅನೇಕ ಗಣ್ಯರು ಮಾಲಾರ್ಪಣೆ ಮಾಡಿ, ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್, ಮಾಜಿ ಸಂಸದರಾದ ಬಿ.ವಿ.ನಾಯಕ, ಯುವ ಮುಖಂಡರಾದ ರವಿ ಭೋಸುರಾಜು, ನಗರಸಭೆಯ ಅಧ್ಯಕ್ಷರಾದ ನರಸಮ್ಮ ಮಾಡಗಿರಿ, ಉಪಾಧ್ಯಕ್ಷರಾದ ಸಾಜೀದ್ ಸಮೀರ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮ, ರಾಯಚೂರು ನಗರಸಭೆಯ ಪೌರಾಯುಕ್ತರಾದ ಗುರುಸಿದ್ದಯ್ಯ ಸ್ವಾಮಿ ಹಿರೇಮಠ, ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಸಮಾಜದ ಮುಖಂಡರು ಇದ್ದರು.