ವಾಲ್ಮೀಕಿ ಶ್ರೀಗಳಿಗೆ ಲಘು ಹೃದಯಾಘಾತ, ರಾಯಚೂರಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಹೈದರಾಬಾದ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಜಯ ಧ್ವಜ ನ್ಯೂಸ್ , ರಾಯಚೂರು,ಫೆ.19 - ರಾಯಚೂರು ಜಿಲ್ಲಾ ಪ್ರವಾಸದಲ್ಲಿದ್ದರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಡಾ. ಪ್ರಸನ್ನಾನಂದಪುರಿ ಮಹಾಸ್ವಾಮಿಗಳು ಲಘು ಹೃದಯಾಘಾತಕ್ಕೆ ಒಳಗಾಗಿದ್ದರು. ಈಗ ಹೈದರಾಬಾದ್ ಆಸ್ಪತ್ರೆಯಲ್ಲಿ ಗುಣಮುಖರಾಗಿದ್ದಾರೆ. ಶ್ರೀಗಳು ಬುಧವಾರ ಬೆಳಿಗ್ಗೆ ತಿಂಥಣಿ ಬ್ರಿಜ್ ಸಮೀಪದ ಬಂಡೊಳ್ಳಿ ಗ್ರಾಮದಲ್ಲಿರುವ ಶ್ರೀ ಮಠದ ಉದ್ದೇಶಿತ ವಿದ್ಯಾಸಂಸ್ಥೆ ಮಾಡುವ ಸ್ಥಳಕ್ಕೆ ಭೆಟ್ಟಿ ನೀಡಿ ಸಮಾಜದ ಮುಖಂಡರೊಂದಿಗೆ ಸ್ಥಳ ವೀಕ್ಷಿಸಿ ಸಭೆ ಕೂಡ ಮಾಡಿದ್ದರು. ನಂತರ ಅಲ್ಲಿಯೇ ಇರುವ ಕನಕಗುರು ಪೀಠಕ್ಕೆ ತೆರಳಿ ಇತ್ತೀಚೆಗೆ ಲಿಂಗೈಕ್ಯರಾಗಿರುವ ಶ್ರೀ ಸಿದ್ದರಾಮಾನಂದ ಪುರಿ ಮಹಾಸ್ವಾಮಿಗಳ ಗದ್ದುಗೆಗೆ ಪೂಜೆ ನಮನ ಸಲ್ಲಿಸಿ ಅಲ್ಲಿಂದ ಹಟ್ಟಿ ಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳಿದ್ದರು. ಬೆಳಿಗ್ಗೆ ಯಿಂದ ಗುರುಗಳು ಲವಲವಿಕೆಯಿಂದಲೇ ಇದ್ದರು. ಆದರೆ, ಹಟ್ಟಿಯಲ್ಲಿ ಲಘು ಹೃದಯಾಘಾತ ಉಂಟಾಗಿದ್ದರಿಂದ ತಕ್ಷಣವೇ ಅವರನ್ನು ರಾಯಚೂರಿನ ವಿಜಿ ಕುಲಕರ್ಣಿ ಹೃದಯ ಆಸ್ಪತ್ರೆಗೆ ಎಸ್ಕಾರ್ಟ್ ಸಹಾಯದೊಂದಿಗೆ ರಾತ್ರಿ 9 ಗಂಟೆ ವೇಳೆ ಸಮಯದಲ್ಲಿ ಆಗಮಿಸಿ ಸೇರಿಸಲಾಗಿತ್ತು. ಈ ಸಂದರ್ಭದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಕೆ.ಶಿವನಗೌಡ ನಾಯಕ ಅವರು ಮೊಬೈ...