ಹತ್ಯೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನೊಂದ ಕುಟುಂಬಗಳಿಗೆ ಆದಿಜಾಂಬವ ಅಭಿವೃದ್ಧಿ ನಿಗಮದ ನೆರವು- ಜಿ.ಎಸ್. ಮಂಜುನಾಥ್ ಜಯ ಧ್ವಜ ನ್ಯೂಸ್ ,ರಾಯಚೂರು. ಸೆ.10- ಜಿಲ್ಲೆಯಲ್ಲಿ ನಡೆದಿರುವ ಹತ್ಯೆ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ನೊಂದ ಕುಟುಂಬಗಳಿಗೆ ನೆರವು ನೀಡಲು ನಮ್ಮ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಎಸ್. ಮಂಜುನಾಥ್ ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡಿದರು. ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದಲ್ಲಿ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಾದಿಗ ಸಮುದಾಯದ ಸುಮಾರು 37 ವರ್ಷದ ಭೂಮಾನಂದ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಭೂಮಾನಂದ ಅವರ ಕುಟುಂಬಕ್ಕೆ ನೆರವು ನೀಡುವ ಉದ್ದೇಶದಿಂದ ಅವರ ಧರ್ಮಪತ್ನಿ ಗೌರಮ್ಮ ಅವರಿಗೆ ಎರಡು ಎಕರೆ ಜಮೀನು ಹಾಗೂ ಬೋರ್‌ವೆಲ್ ಒದಗಿಸಲು ನಿಗಮದಿಂದ ತೀರ್ಮಾನಿಸಲಾಗಿದೆ ಎಂದು ಹೇಳಿದರು. ಇವರ ಕುಟುಂಬಕ್ಕೆ ಕಳೆದ ವಾರ ಸಮಾಜ ಕಲ್ಯಾಣ ಇಲಾಖೆ ಸಚಿವರು ಭೇಟಿ ನೀಡಿರುವ ಕುರಿತು ತಮ್ಮ ಗಮನಕ್ಕೆ ತಂದಿದ್ದು, ಜಿಲ್ಲಾಧಿಕಾರಿಗಳಿಗೆ ಎರಡು ಎಕರೆ ಜಮೀನು ಮಂಜೂರು ಮಾಡುವ ಪ್ರಕ್ರಿಯ...